Breaking News

ರಾಜ್ಯದಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ ಬಸ್ : ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು

ಬೆಂಗಳೂರು :ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್ ವೊಂದು ಹೊತ್ತಿ ಉರಿದಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಜನಾ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ ಹೊತ್ತಿ ಉರಿದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹನುಮಂತಪುರ ಗೇಟ್ ಬಳಿ ಬಸ್ ಹೊತ್ತಿ ಉರಿದಿದ್ದು, ಬೆಂಕಿಯಿಂದ ಖಾಸಗಿ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿದು ನೆಲಮಂಗಲ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *