Breaking News

ಬೆಂಗಳೂರು ಏರ್ ಪೋರ್ಟ್ ನಲ್ಲಿ ಕೋಟ್ಯಂತರ ರೂಪಾಯಿ ಚಿನ್ನ, ವಜ್ರಾಭರಣ ಕಳ್ಳತನ: ಸಿಬ್ಬಂದಿಯಿಂದಲೇ ಕೃತ್ಯ ಶಂಕೆ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋಟ್ಯಂತರ ರೂಪಾಯಿ ಚಿನ್ನಾಭರಣ, ವಜ್ರಾಭರಣಗಳು ಕಳ್ಳತನವಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನಿಮ್ದ ದುಬೈಗೆ ತೆರಳುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ವಜ್ರ ಕಳ್ಳತನವಾಗಿದೆ. ಮಹಿಳೆ ಚೆಕ್ ಇನ್ ನಲ್ಲಿ ಚಿನ್ನ ತೋರಿಸಿ ಬ್ಯಾಗ್ ಗೆ ಟ್ಯಾಗ್ ಮಾಡಿದ್ದರು. ಲಗೇಜ್ ಬ್ಯಾಗ್ ನಲ್ಲಿಟ್ಟಿದ್ದ ಚಿನ್ನ ದುಬೈಗೆ ಹೋಗುವಷ್ಟರಲ್ಲಿ ಮಾಯವಾಗಿದೆ. ಏರ್ ಪೋರ್ಟ್ ಸಿಬ್ಬಂದಿಯೇ ಚಿನ್ನಾಭರಣ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ. 790 ಗ್ರಾಂ ಚಿನ್ನ, 8 ಲಕ್ಷ ಬೆಲೆ ಬಾಳುವ ವಜ್ರಾಭರಣಗಳು ಇದ್ದವು. ಎಲ್ಲವೂ ಕಳ್ಳತನವಾಗಿದೆ. ಬೆಂಗಳೂರು ಏರ್ ಪೋರ್ಟ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *