Breaking News

ಕೊಪ್ಪಳ | ವಿದೇಶಿ ಮಹಿಳೆಯ ಅತ್ಯಾಚಾರ, ಪ್ರವಾಸಿಗನ ಕೊಲೆ ಪ್ರಕರಣ: ಮೂವರು ಆರೋಪಿಗಳು ದೋಷಿಗಳು ಎಂದು ಘೋಷಿಸಿದ ನ್ಯಾಯಾಲಯ

ಕಳೆದ ವರ್ಷ ಸಣಾಪುರ ಕಾಲುವೆ ದಂಡೆಯ ಬಳಿ ನಡೆದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲಿನ ಅತ್ಯಾಚಾರ ಹಾಗೂ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ದೋಷಿಗಳು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣ ದಾಖಲಾದ 9 ತಿಂಗಳ ಒಳಗೆ ತೀರ್ಪು ನೀಡಿರುವ ನ್ಯಾಯಾಲಯ, ಶಿಕ್ಷೆಯ ಪ್ರಮಾಣವನ್ನು ಫೆ.16ರಂದು ಪ್ರಕಟಿಸುವುದಾಗಿ ತಿಳಿಸಿದೆ. ಈ ಪ್ರಕರಣದಲ್ಲಿ ಸಾಯಿನಗರದ ಮಲ್ಲೇಶ್ (ಹಂದಿಮಲ್ಲ), ಸಾಯಿ (ಚೈತನ್ಯ ಸಾಯಿ) ಹಾಗೂ ಶರಣಪ್ಪ (ಶರಣು ಬಸವರಾಜ್) ಎಂಬ ಮೂವರು ಆರೋಪಿಗಳು ದೋಷಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಹಲ್ಲೆಯ ಪರಿಣಾಮ ಒಡಿಶಾ ಮೂಲದ ಬಿಬಾಶ್ ಎಂಬ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಇದೇ ವೇಳೆ ಇಸ್ರೇಲ್ ಮೂಲದ ಮಹಿಳೆ ಹಾಗೂ ಸ್ಥಳೀಯ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿತ್ತು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *