ಗುಂಡ್ಲುಪೇಟೆ(ಚಾಮರಾಜನಗರ): ಸಾಲದ ಸುಳಿಗೆ ಸಿಲುಕಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಫೆ.6ರ ಶುಕ್ರವಾರ ನಡೆದಿದೆ. ತಾಲೂಕಿನ ಬೇಗೂರು ಗ್ರಾಮದ ಸುರೇಶ್(28) ಮೃತ ಯುವಕ. ಈತ ಆಟೋ ಚಾಲಕನಾಗಿದ್ದು, ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಎನ್ನಲಾಗುತ್ತಿದ್ದು, ಮಾನಸಿಕ ಹಿಂಸೆ ತಾಳಲಾರದೆ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೇಗೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರ ಮಾಡಿದ್ದಾರೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

