ಕುಂಬಳೆ: ನಾಯ್ಕಾಪು ನಿವಾಸಿ ನ್ಯಾಯವಾದಿ ಚೈತ್ರಾ ಅವರ ಮನೆಯಿಂದ 29 ಪವನ್ ಚಿನ್ನ ಹಾಗು 25 ಸಾವಿರ ರೂ. ಮೌಲ್ಯದ ಬೆಳ್ಳಿ ಹಾಗು ಐದು ಸಾವಿರ ರೂ. ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೀಡಾದ ಇಬ್ರಾಹಿಂ ಕಲಂದರ್‌ನನ್ನು ಕುಂಬಳೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಳವುಗೈದ ಚಿನ್ನ ಪತ್ತೆಹಚ್ಚಲು ಹಾಗು ಇದರಲ್ಲಿ ಇತರ ಆರೋಪಿಗಳಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲು ಆರೋಪಿಯನ್ನು ವಶಕ್ಕೆ ನೀಡಬೇಕೆಂದು ಆಗ್ರಹಿಸಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದರಂತೆ ಈತನನ್ನು ನಾಲ್ಕು ದಿನಗಳಿಗೆ ಪೊಲೀಸ್ ವಶಕ್ಕೆ ನೀಡಲಾಗಿದೆ. ಜ.18 ರಂದು ಸಂಜೆ 6 ರಿಂದ ರಾತ್ರಿ 8 ಗಂಟೆಯ ಮಧ್ಯೆ ಕಳವು ಮಾಡಲಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆದಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

