ದೇವನಹಳ್ಳಿ : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 2.97 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಈ ಗಾಂಜಾವನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪತ್ತೆಹಚ್ಚಲಾಗಿದೆ. ಪುಕೆಟ್ ಮತ್ತು ಮಲೇಶಿಯಾದಿಂದ ಬೆಂಗಳೂರಿನ ಕೆಐಎಬಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ಮೂವರು ಆರೋಪಿಗಳ ಲಗೇಜ್ ಪರಿಶೀಲನೆ ಮಾಡುವ ವೇಳೆ ಈ ಹೈಡ್ರೋ ಗಾಂಜಾ ಪತ್ತೆಯಾಗಿತ್ತು. ಮೂವರ ಬ್ಯಾಗ್ಗಳಲ್ಲೂ ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇಮಿಗ್ರೇಶನ್ ಪರಿಶೀಲನೆ ವೇಳೆ ಅನುಮಾನಾಸ್ಪದ ಚಲನವಲನ ಕಂಡು ಬಂದ ಹಿನ್ನೆಲೆ ಲಗೇಜ್‌ಗಳನ್ನು ತಪಾಸಣೆ ನಡೆಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ ಹೈಡ್ರೋಗಾಂಜಾ ಪತ್ತೆಯಾಗಿದೆ. ಗಾಂಜಾ ಸಮೇತ ಮೂವರನ್ನೂ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

