ಕೊಡಗು : ಕರ್ನಾಟಕದಲ್ಲಿ ಮತ್ತೊಬ್ಬ ಉದ್ಯಮಿ ತನ್ನ ಕುಟುಂಬದ ಜೊತೆಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಸಜೀರ್ ಎನ್ನುವ ವ್ಯಕ್ತಿ ಕಾರಿನಲ್ಲಿ ತನ್ನ ಕುಟುಂಬದ ಜೊತೆಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಘಟನೆಯಲ್ಲಿ ಸಜೀರ್ ಸಾವನ್ನಪ್ಪಿದ್ದು, ಸಜೀರ್ ಪತ್ನಿ ಹಾಗೂ ಅವರ ಇಬ್ಬರು ಮಕ್ಕಳನ್ನು ಸ್ಥಳೀಯರು ಕಾಪಾಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆಗೆ ಮುನ್ನ ಸಜೀರ್ ವಿಡಿಯೋ ಮಾಡಿದ್ದು ಅದರಲ್ಲಿ ತನ್ನ ಸಾವಿಗೆ ಕಾರಣವಾಗಿರುವ ವ್ಯಕ್ತಿ ಬಗ್ಗೆ ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

