Breaking News

ಮಂಗಳೂರು| ಶಾಸಕ ವೇದವ್ಯಾಸ ಕಾಮತ್‌ರ ಪತ್ನಿಯ ಅವಹೇಳನ ಪ್ರಕರಣ: ಆರೋಪಿ ಸೆರೆ

ಶಾಸಕ ವೇದವ್ಯಾಸ ಕಾಮತ್ ಮತ್ತವರ ಪತ್ನಿಯ ವಿರುದ್ಧ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇ ಗೌಡ ಹೇಳಿದ್ದಾರೆ ಎನ್ನಲಾದ ಮಾತನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಾಕಿದ್ದ ವ್ಯಕ್ತಿಯನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ನಿವಾಸಿ ಶರಣ್ ರೈ (29) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಹೇಳಿಕೆಯಿಂದ ಶಾಸಕರ ಪತ್ನಿಯ ಬಗ್ಗೆ ಸಮಾಜದಲ್ಲಿ ಅಗೌರವ ಉಂಟಾಗಿದೆ. ಮಹಿಳೆಯರ ಬಗ್ಗೆ ಕೀಳು ಅಭಿರುಚಿಯಿಂದ ಪೋಸ್ಟ್ ಮಾಡಿದ್ದಾಗಿದೆ ಎಂಬ ದೂರಿನ ಹಿನ್ನಲೆಯಲ್ಲಿ ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *