ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಹುಳಿಮಾವು-ದೇವರಚಿಕ್ಕನಹಳ್ಳಿ ಮುಖ್ಯರಸ್ತೆಯಲ್ಲಿ ಭಾರೀ ಹೈಡ್ರಾಮಾ ನಡೆದಿದ್ದು, ಮದ್ಯ ಸೇವಿಸಿ ಇಬ್ಬರು ಯುವತಿಯರು ಕಿರಿಕ್ ಮಾಡಿದ್ದಾರೆ. ಈ ವೇಳೆ ಇಬ್ಬರು ಯುವತಿಯರನ್ನು ಸ್ಥಳೀಯರು ಬೆನ್ನತ್ತಿ ಹಿಡಿದಿದ್ದಾರೆ. ಲೀಸಾ, ಮ್ಯಾಥ್ಯೂ ಎಂಬ ಯುವತಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಯರು ಎಣ್ಣೆ ಏಟಲ್ಲಿ ಬೀದಿ ರಂಪಾಟ ಮಾಡಿದ್ದಾರೆ. ನಶೆಯಲ್ಲೇ ಇಬ್ಬರು ಯುವತಿಯರು ಬೈಕ್ ಚಾಲನೆ ಮಾಡಿದ್ದಾರೆ. ಈ ವೇಳೆ ಹಿಂದಿನಿಂದ ಕ್ಯಾಬ್ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದಿದ್ದಕ್ಕೆ ಕಾರು ಚಾಲಕ ಪ್ರಶ್ನೆ ಮಾಡಿದ್ದಾನೆ. ಪ್ರಶ್ನೆ ಮಾಡಿದಕ್ಕೆ ಯುವತಿಯರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ಕ್ಯಾಬ್ ಚಾಲಕನ ಜೊತೆಗೆ ಕಿರಿಕ್ ಮಾಡಿ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಚಾಲಕನ ರಕ್ಷಣೆಗೆ ಬಂದಿದ್ದಾರೆ. ಜನರ ಜೊತೆಗೂ ಯುವತಿಯರು ಅಸಭ್ಯವಾಗಿ ವರ್ತಿಸಿದ್ದಾರೆ. ಬಳಿಕ ಪೊಲೀಸರ ಎದುರಿಗೂ ಅಸಭ್ಯವಾಗಿ ವರ್ತಿಸಿದ್ದಾರೆ. ಸದ್ಯ ಇಬ್ಬರು ಯುವತಿಯರ ವಿರುದ್ಧ ಕೇಸ್ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

