Breaking News

ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ’ ಘಟನೆ : ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ.!

ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಮಹಿಳೆ ಮೇಲೆ ಅನ್ಯಕೋಮಿನ ಯುವಕರು ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಚಿಂದಿ ಆಯುವ ಮಹಿಳೆಯನ್ನು ದುಷ್ಕರ್ಮಿಗಳು ಎಳೆದಾಡುತ್ತಾ ಕಾರಿನಲ್ಲಿ ಹೊತ್ತೊಯ್ಯಲು ಯತ್ನಿಸಲಾಗಿದೆ. ಈ ವೇಳೆ ಮಹಿಳೆ ಕಿರುಚಾಡುತ್ತಿದ್ದಂತೆ ಹಲ್ಲೆಗೈದು ಯುವಕರ ಗ್ಯಾಂಗ್ ಪರಾರಿಯಾಗಿದೆ. ಗಾಯಗೊಂಡ ಮಹಿಳೆಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರಗಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *