Breaking News

ಪಾರ್ಟಿ ವೇಳೆ ಸ್ಪಿರೀಟ್ ಕುಡಿದು ಅಸ್ವಸ್ಥರಾಗಿದ್ದ ಇಬ್ಬರು ಯುವಕರು ಸಾವು

ಕೊಪ್ಪಳ: ಪಾರ್ಟಿಯಲ್ಲಿ ಸ್ಪಿರೀಟ್ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿದ್ದ ನಾಲ್ವರಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಕೂಕನಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಫೆಬ್ರವರಿ 4೪ರಂದು ಕೂಕನಳ್ಳಿಯಲ್ಲಿ ಪಾರ್ಟಿ ಮಾಡಿದ್ದ ನಾಲ್ಕೈದು ಯುವಕರು ಸ್ಪಿರೀಟ್ ಕುಡಿದಿದ್ದರು. ಸ್ಪಿರೀಟ್ ಸೇವಿಸಿದ್ದ ನಾಲ್ವರು ಯುವಕರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ನಾಲ್ವರನ್ನೂ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಇದೀಗ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಯುವಕ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪಿದ್ದಾರೆ. ರಮೇಶ್ ಹೊಸಹಳ್ಳಿ (24) ಹಾಗೂ ಅಮರಯ್ಯ ಹಿರೇಮಠ ಮೃತ ದುರ್ದೈವಿಗಳು. ಇನ್ನೋರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರೆದಿದೆ. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *