Breaking News

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ: ರೌಡಿಶೀಟರ್ ಅರೆಸ್ಟ್

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ರೌಡಿಶೀಟರ್ ಪಳನಿ ಅಲಿಯಾಸ್ ಕರ್ಚಿಫ್ ಪಳನಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಶೋಕನಗರ, ಕೋಣನಕುಂಟೆ, ಕೆಎಸ್ ಲೇಔಟ್, ವಿಲ್ಸನ್ ಗಾರ್ಡನ್, ಬೆಳ್ಳಂದೂರು ಮತ್ತು ಇತರೆ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಕಳ್ಳತನ ಸೇರಿ 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿ ಪಳನಿ ಬೇಕಾಗಿದ್ದ. ಕಸವನಹಳ್ಳಿಯ ಸ್ಲಂ ಬೋರ್ಡ್ ಮನೆಯಲ್ಲಿ ವಾಸವಾಗಿದ್ದು, ಸ್ಥಳೀಯರನ್ನು ಬೆದರಿಸುತ್ತಿದ್ದ. ನಾನು ಹಲವು ಕೊಲೆ ಮಾಡಿದ್ದೇನೆ. ನಾನು ಹೇಳಿದಂತೆ ಕೇಳಬೇಕು. ನನಗೆ ಹಣ ಕೊಡಬೇಕು ಎಂದು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಿಚಾರಣೆಗೆ ತೆರಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದ. ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *