ಬೀದರ್ : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಓಂ ಬಡಾವಣೆಯಲ್ಲಿ ನಡೆದಿದೆ.ಓಂ ಬಡಾವಣೆಯ ಅಂಜನಾಬಾಯಿ ಆತ್ಮಹತ್ಯೆಗೆ ಶರಣಾಗಿರುವ ಮಹಳೆ. ಪತಿ ಮನೆಯವರು ನಿತ್ಯ ಕಿರುಕುಳ ನೀಡುತ್ತಿದ್ದರು ಎನ್ನುವ ಆರೋಪ ಕೇಳಿಬಂದಿದೆ. 2022ರಲ್ಲಿ ಶೇಖರ್ ಜೊತೆಗೆ ಅಂಜನಾಬಾಯಿ ವಿವಾಹವಾಗಿದ್ದರು. ಮದುವೆ ಬಳಿಕ ಅಂಜನಾಬಾಯಿಗೆ ನಿತ್ಯ ಕಿರುಕುಳ ನೀಡಲಾಗುತ್ತಿತ್ತು. ವೇಶ್ಯಾವಾಟಿಕೆ ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಬೇಸತ್ತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

