ಬೇಲೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಬೇಲೂರು ಪೊಲೀಸರು, ಬಂಧಿತರಿಂದ 50,000 ರೂ ಬೆಲೆ ಗಾಂಜಾ ವಶಕ್ಕೆ ಪಡೆದಿದ್ದಾರೆ. ಪಟ್ಟಣ ಸಮೀಪದ ಬಂಟೇನಹಳ್ಳಿಯಲ್ಲಿರುವ ಅರಣ್ಯ ಇಲಾಖೆ ಸಮೀಪ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಇನ್‌ಸ್ಪೆಕ್ಟರ್ ರೇವಣ್ಣ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಸ್ಕೂಟಿಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಂಟೇನಹಳ್ಳಿ ನಿವಾಸಿ ಶಶಾಂಕ್, ಹೊಸ ನಗರ ನಿವಾಸಿ ದಿಲೀಪ್‌ನನ್ನು ವಶಕ್ಕೆ ಪಡೆದು 220 ಗ್ರಾಂ ಗಾಂಜಾ ಹಾಗೂ ಸ್ಕೂಟಿಯನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜು, ಬೇಲೂರು ಪೊಲೀಸ್ ಠಾಣೆ ಪಿಎಸ್‌ಐ ಶಿವನಗೌಡ ಜಿ. ಪಾಟೀಲ್, ಸಿಬ್ಬಂದಿ ಸತೀಶ್, ಅಣ್ಣಪ್ಪ, ಉಮೇಶ್, ಪ್ರದೀಪ್ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

