Breaking News

ಬೆಂಗಳೂರು: ಬ್ರೇಕ್ ವೈಫಲ್ಯ; ಮರ, ಹೋಟೆಲ್‌ಗೆ ಬಸ್‌ ಡಿಕ್ಕಿ

ಮಹಾಲಕ್ಷ್ಮಿ ಲೇಔಟ್‌ನ ಕಮಲಾನಗರದತ್ತ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ವೊಂದು ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿ ಮರ ಹಾಗೂ ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ. ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು.ಇದೇ ವೇಳೆ ಬ್ರೇಕ್ ವೈಫಲ್ಯದಿಂದ ನಿಂತಿದ್ದ ಬಸ್‌ಗೆ ಹಿಂಬದಿಯಿಂದ ಬೈಕ್ ಹಾಗೂ ಕಾರು ಡಿಕ್ಕಿ ಹೊಡೆದ ಘಟನೆ ಸಹ ನಡೆದಿದೆ. ಯಾವುದೇ ಗಂಭೀರ ಅನಾಹುತ ಸಂಭವಿಸಿಲ್ಲ. ಘಟನೆಯ ಮಾಹಿತಿ ತಿಳಿದ ಕೂಡಲೇ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಬಸ್‌ನಲ್ಲಿದ್ದ ಪ್ರಯಾಣಿಕರ ಯೋಗಕ್ಷೇಮ ವಿಚಾರಿಸಿದರು. ಅಲ್ಲದೇ ಸ್ಥಳಕ್ಕೆ ಬಿಎಂಟಿಸಿ ಅಧಿಕಾರಿಗಳನ್ನು ಕರೆಸಿ ಘಟನೆ ಸಂಬಂಧ ಮಾಹಿತಿ ಪಡೆದುಕೊಂಡರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *