Breaking News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಬೆಂಗಳೂರು : ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಥಾಯ್ಲೆಂಡ್‍ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‍ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದಾಗ, ಪ್ಯಾಕೆಟ್‍ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ, ಆರೋಪಿಗಳ ವಿರುದ್ಧ ಕಸ್ಟಮ್ಸ್ ಅಧಿಕಾರಿಗಳು ಕಾನೂನು ಕ್ರಮ ಜರುಗಿಸಿರುವುದಾಗಿ ತಿಳಿದುಬಂದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *