Breaking News

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು:37 ವರ್ಷದ ಚಂದನ್ ಕುಮಾರ್ ಹತ್ಯೆಯಾದ ವ್ಯಕ್ತಿ. ಬೆಂಗಳೂರಿನ ನೆಲಮಂಗಲ ಮೂಲದ ತ್ಯಾಮಗೊಂಡ್ಲುವಿನ ನಿವಾಸಿ. ಕಳೆದ 6 ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ 9 ಗಂಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಂದನ್ ಕುಮಾರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹಲವು ಗುಂಡುಗಳು ಚಂದನ್ ದೇಹವನ್ನು ಹೊಕ್ಕಿವೆ. ಘಟನಾ ಸ್ಥಳದಲ್ಲೇ ಚಂದನ್ ಸಾವನ್ನಪ್ಪಿದ್ದಾರೆ. ಚಂದನ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಸಾವನ್ನಪ್ಪಿದ್ದಾಗಿ ಕೆನಡಾ ಪೊಲೀಸರು ನೆಲಮಂಗಲದಲ್ಲಿರುವ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಗನನ್ನು ಕಳೆದುಕೊಂಡಿರುವ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಮೃತದೇಹವನ್ನು ನೆಲಮಂಗಲಕ್ಕೆ ತರಲು ಸಹಾಯ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪೋಷಕರು ಮನವಿ ಮಾಡಿದ್ದಾರೆ. ಯಾವ ಕಾರಣಕ್ಕೆ ಚಂದನ್ ಮೇಲೆ ಗುಂಡಿನ ದಾಳಿ ನಡೆದಿದೆ? ಹತ್ಯೆಗೆ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *