ತುಮಕೂರು: ಮೂರು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ತಾಲೂಕಿನ ಬಾಣವಾರ ಬಳಿ ಫೆ.8ರ ರವಿವಾರ ನಡೆದಿದೆ. ಮುರುಳಿ, ಸುರೇಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಳಿದ ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ತೆರಳುತ್ತಿದ್ದ ಕ್ವಾಲಿಸ್ ಮತ್ತು ಮುಂದೆ ಬರುತಿದ್ದ ಎಸ್ಟೀಮ್ ಹಾಗೂ ಬೋಲೆನೋ ಕಾರಿನ ನಡುವೆ ತುಮಕೂರು-ಕುಣಿಗಲ್ ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹೆಬ್ಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

