ಯಾದಗಿರಿ : ಜಿಲ್ಲೆಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ತಾನೇ ಹೆತ್ತ 10 ವರ್ಷದ ಮಗಳನ್ನು ಕ್ಷುಲ್ಲಕ ಕಾರಣಕ್ಕೆ ತಾಯಿಯೇ ಕತ್ತು ಹಿಸುಕಿ ಹತ್ಯೆಗೈದಿರುವ ಘೋರ ಕೃತ್ಯ ಬೆಳಕಿಗೆ ಬಂದಿದೆ. ಯಾದಗಿರಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.ಆರಂಭದಲ್ಲಿ ತಾಯಿ ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸುತ್ತಮುತ್ತಲಿನವರಿಗೆ ಮತ್ತು ಪೊಲೀಸರಿಗೆ ನಂಬಿಸಲು ಯತ್ನಿಸಿದ್ದಳು. “ನಾನು ಮಗಳಿಗೆ 15 ರೂಪಾಯಿ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಅವಳು ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ” ಎಂದು ಸುಳ್ಳು ಕಥೆ ಕಟ್ಟಿದ್ದಳು. ಬಾಲಕಿಯ ಸಾವು ಅನುಮಾನಾಸ್ಪದವಾಗಿ ಕಂಡಿದ್ದರಿಂದ ಪೊಲೀಸರು ತಾಯಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು. ಪೊಲೀಸರ ಸತತ ವಿಚಾರಣೆ ಮತ್ತು ವೈದ್ಯಕೀಯ ತಪಾಸಣೆಯ ನಂತರ, ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ, ಬದಲಿಗೆ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬ ಸತ್ಯ ಬಯಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

