ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಚಿಕ್ಕಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮುಂದೆ ಸಾಗುತ್ತಿದ್ದ ಬೊಲೇರೊ ಜೀಪ್‌ಗೆ ಹಿಂಬದಿಯಿಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೊಲೇರೊವನ್ನು ಸುಮಾರು ಅರ್ಧ ಕಿಲೋ ಮೀಟರ್ ದೂರ ತಳ್ಳಿಕೊಂಡು ಹೋಗಿರುವ ಲಾರಿ, ಬಳಿಕ ವಾಹನದ ಮೇಲೆಯೇ ಉರುಳಿ ಬಿದ್ದಿದೆ. ಅಪಘಾತದ ಪರಿಣಾಮ ಬೊಲೇರೊ ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗುವಂತೆ ಮಾಡಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

