Breaking News

ಕೋಲಾರದಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಆಂಧ್ರ ಮೂಲದ ರೌಡಿಶೀಟರ್ ಬರ್ಬರ ಹತ್ಯೆ!

ಕೋಲಾರದಲ್ಲಿ ಭೀಕರವಾದ ಕೊಲೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಆಂಧ್ರಪ್ರದೇಶ ಮೂಲದ ರೌಡಿಶೀಟರ್ ನನ್ನ ಕೊಚ್ಚಿ ಕೊಲೆ ಮಾಡಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಬ್ಬಳ್ಳಿ ಬಳಿ ಈ ಒಂದು ಬರ್ಬರ ಕೊಲೆ ನಡೆದಿದೆ. ರೌಡಿಶೀಟರ್ ಆದ ಭಾಸ್ಕರನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರೌಡಿಶೀಟರ್ ಭಾಸ್ಕರ್ ಡ್ರೈವರ್ ಕೆಲಸ ಮಾಡಿಕೊಂಡಿದ್ದ ಆಂಧ್ರಪ್ರದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಭಾಸ್ಕರ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಸದ್ಯ ಸ್ಥಳಕ್ಕೆ ನಂಗಲಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *