Breaking News

ಬಸ್‌ ಹತ್ತುವಾಗ ₹4.50 ಮೌಲ್ಯದ ಚಿನ್ನಾಭರಣ ಕಳವು

ಕಲಬುರಗಿ: ನಗರದ ರಾಮಮಂದಿರ ವೃತ್ತದಲ್ಲಿ ಮಹಿಳೆಯೊಬ್ಬರು ಬಸ್‌ ಹತ್ತುವಾಗ ಅವರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಶಹಾಬಾದ್‌ನ ಭಂಕೂರ ಗ್ರಾಮ ನಿವಾಸಿ ಸಂಗೀತಾ ಗೌರ ಚಿನ್ನಾಭರಣ ಕಳೆದುಕೊಂಡ ಮಹಿಳೆ. ‘ಕಲಬುರಗಿಯಲ್ಲಿ ಸಂಬಂಧಿಕರ ಧಾರ್ಮಿಕ ಕಾರ್ಯಕ್ರಮ ಮುಗಿಸಿಕೊಂಡು ಊರಿಗೆ ಹೋಗಲು ರಾಮಮಂದಿರಲ್ಲಿ ಬಸ್‌ ಏರಿ ಕುಳಿತೆ. ಟಿಕೆಟ್ ತೆಗೆಸಲು ನೋಡಿದಾಗ ನನ್ನ ವ್ಯಾನಿಟಿ ಬ್ಯಾಗ್‌ ಚೈನ್‌ ತೆರೆದಿತ್ತು. ಅದರಲ್ಲಿ ಇಟ್ಟಿದ್ದ ₹4.50 ಲಕ್ಷ ಮೌಲ್ಯದ 30 ಗ್ರಾಂ ಚಿನ್ನಾಭರಣಗಳು ಇರಲಿಲ್ಲ’ ಎಂದು ದೂರಿನಲ್ಲಿ ಸಂಗೀತಾ ತಿಳಿಸಿದ್ದಾರೆ. ಈ ಕುರಿತು ಕಲಬುರಗಿ ಸ್ಟೇಷನ್‌ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *