ವಿಜಯಪುರ: ತಾಲ್ಲೂಕಿನ ಕನ್ನೂರು ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ 11.43ಕ್ಕೆ ಲಘು ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ 2.6 ಭೂಕಂಪನದ ತೀವ್ರತೆ ದಾಖಲಾಗಿದೆ. ಭೂಮಿ ಒಳಗಿನಿಂದ ಸ್ಪೋಟದ ಸದ್ದು ಕೇಳಿಬಂದಿಂದೆ. ಭೂಮಿ ಕಂಪಿಸಿದ್ದರಿಂದ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ‘ಭೂಕಂಪನ ತೀವ್ರತೆ ಕಡಿಮೆಯಿದ್ದು, ಈ ರೀತಿಯ ಭೂಕಂಪವು ಸ್ಥಳೀಯರಿಗೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ. ಭೂಕಂಪನ ಕೇಂದ್ರಬಿಂದುವು ಭೂಕಂಪನ ವಲಯ ಮೂರರಲ್ಲಿ ಬರುವುದರಿಂದ ಜನರು ಭಯಭೀತರಾಗಬೇಕಾಗಿಲ್ಲ’ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು ಪ್ರಕಟಣೆಯಲ್ಲಿ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

