Breaking News

ಬೊಲೆರೋ ಡಿಕ್ಕಿಯಾಗಿ ಬೈಕ್​ ಸವಾರ ಸಾವು

ಕನಕಪುರ:ರಾಮನಗರ & ಚಿಕ್ಕೇನಹಳ್ಳಿ ರಸ್ತೆಯಲ್ಲಿ ಬಳಿ ಬೊಲೆರೋ ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತಾಲೂಕಿನ ಚಿಕ್ಕೇನಹಳ್ಳಿ ಸಮೀಪದ ಕೆಂಬರಲು ಗ್ರಾಮದ ಸಾಗರ್​(24) ಮೃತ. ರಾಮನಗರ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಬೊಲೆರೋ ಡಿಕ್ಕಿಯಾದ್ದು, ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಗ್ರಾಮಾಂತರ ಪೊಲೀಸ್​ ಸಬ್​ಇನ್​ಸ್ಪೆಕ್ಟರ್​ ಆಕಾಶ್​ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *