ಬೆಂಗಳೂರು: ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗಿದ್ದ ಒಬ್ಬ ಮಹಿಳೆ ಸೇರಿದಂತೆ 8 ಮಂದಿ ವಿದೇಶಿ ಪ್ರಜೆಗಳನ್ನು ಸಂಜಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕ್ಯಾಮರೂನ್ ದೇಶದ ಐವರು ಹಾಗೂ ಸೂಡಾನ್ ದೇಶದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು 4 ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಡಿ ಬೆಂಗಳೂರಿಗೆ ಬಂದಿದ್ದ ವಿದೇಶಿ ಪ್ರಜೆಗಳು, ವೀಸಾ ಅವಧಿ ಮುಕ್ತಾಯಗೊಂಡಿದ್ದರು. ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದರು. ಈ ಹಿಂದೆ ನಗರದ ಗಡಿಭಾಗದಲ್ಲಿವಾಸವಾಗಿದ್ದ ಆರೋಪಿಗಳು, ಇತ್ತೀಚೆಗೆ ಸಂಜಯನಗರದ ಭೂಪಸಂದ್ರದಕ್ಕೆಬಂದು ವಾಸವಾಗಿದ್ದರು. ಕೆಲ ದಿನಗಳಿಂದ ನಡೆಯುತ್ತಿರುವ ಅಕ್ರಮ ವಾಸಿಗಳ ಬಗ್ಗೆ ನಗರಾದ್ಯಂತ ವಿಶೇಷ ಕಾರ್ಯಾಚರಣೆ ನಡೆಯುತ್ತಿದೆ. ಈ ವೇಳೆ ಮಂಗಳವಾರದ ಕಾರ್ಯಾಚರಣೆ ವೇಳೆ ಎಂಟು ಮಂದಿ ಪತ್ತೆಯಾಗಿದ್ದು, ಎಲ್ಲರನ್ನು ಪ್ರಾದೇಶಿಕ ವಿದೇಶಿ ನೋಂದಣಿ ಕಚೇರಿಗೆ ಹಾಜರು ಪಡಿಸಲಾಗುತ್ತದೆ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಅವರ ಮಾತೃ ದೇಶಕ್ಕೆ ವಾಪಸ್ ಕಳುಹಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

