ಮಂಗಳೂರು : ಮಂಗಳೂರಲ್ಲಿ ಆನ್ಲೈನ್ ಮ್ಯಾಟ್ರಿಮೋನಿ ಹೆಸರಲ್ಲಿ ವಂಚನೆ ಮಾಡ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನ ವಂಚನೆಗೆ ಸಾಥ್ ನೀಡಿದ್ದ ಮುಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ಸುಶಾಂತ್ ತನ್ನ ಅಳಿಯ ಎಂದು ಹೇಳಿ ಸಂತ್ರಸ್ತೆಯ ಕುಟುಂಬದವರಿಗೆ ನಂಬಿಕೆ ಮೂಡಿಸಲು ಭಾಸ್ಕರ್ ಧಾರ್ಮಿಕ ವಿಧಿವಿಧಾನಗಳಲ್ಲೂ ಭಾಗವಹಿಸಿದ್ದಾನೆ. ಮದುವೆಯ ಹೆಸರಿನಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 9 ಯುವತಿಯರನ್ನು ಸುಶಾಂತ್ ವಂಚಿಸಿದ್ದಾನೆ. ಈ ಪೈಕಿ ಇಬ್ಬರು ಯುವತಿಯರೊಂದಿಗೆ ಮದುವೆಯಾಗಿ ನಂತರ ಕೈಕೊಟ್ಟಿರುವುದಾಗಿ ತಿಳಿದುಬಂದಿದೆ. ಮುಂಬೈ ಮೂಲದ ಯುವತಿ ಹಾಗೂ ಉಡುಪಿ ಭಾಗದ ಇಬ್ಬರು ಯುವತಿಯರಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದಾನೆ. ಇದೇ ರೀತಿಯಾಗಿ ಬೆಂಗಳೂರಿನಲ್ಲಿ ಇಬ್ಬರು ಯುವತಿಯರು, ಕಾರ್ಕಳದ ಒಬ್ಬ ಯುವತಿ ಹಾಗೂ ಮಂಗಳೂರಿನ ಮತ್ತೊಬ್ಬ ಯುವತಿಯನ್ನೂ ಮೋಸಗೊಳಿಸಿದ್ದ ಪ್ರಕರಣಗಳು ಈಗ ಬೆಳಕಿಗೆ ಬಂದಿವೆ.
Check Also
ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ
ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …
bigtvnews | Hubli Dharwad News | Kannada News | Karnataka News Hubli News | News In Hubli | Local news

