Breaking News

Sorry ಮಮ್ಮಿ, ಡ್ಯಾಡಿ… ಡೆತ್ ನೊಟ್ ಬರೆದಿಟ್ಟು ನೇಣಿಗೆ ಶರಣಾದ SSLC ವಿದ್ಯಾರ್ಥಿ

ಬೀದರ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಡೆತ್ ನೊಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ನವೋದಯ ವಿದ್ಯಾಲಯದ‌ ವಸತಿ ನಿಲಯದಲ್ಲಿ ನಡೆದಿದೆ.ಶರತ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಶರತ್ ಬರೆದಿರುವ ಡೆತ್ ನೋಟ್ ಸಿಕ್ಕಿದೆ ಎನ್ನಲಾಗಿದ್ದು, ಅದರಲ್ಲಿ ಸಾರಿ ಮಮ್ಮಿ- ಡ್ಯಾಡಿ, ಕಿಪ್ ಸ್ಮೈಲಿಂಗ್ ಫಾರೆವರ್ ಎಂದು ಬರೆದಿದ್ದಾನೆ. ಸ್ಥಳಕ್ಕೆ ಬಸವಕಲ್ಯಾಣ ನಗರ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.‌ ಮಗನ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *