Breaking News

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಟಿಪ್ಪರ್ ಹರಿದು ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಮತ್ತು ಪುರುಷ ಸಾವನ್ನಪ್ಪಿದ್ದಾರೆ. ಬನ್ನೇರುಘಟ್ಟ ಮುಖ್ಯ ರಸ್ತೆಯ ಹಾರಗದ್ದೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಸೀತನಾಯಕನಹಳ್ಳಿಯಿಂದ ಜಿಗಣಿಯತ್ತ ಬೈಕ್ ಸವಾರರು ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ನಿಂದ ಕೆಳಗೆ ಬಿದ್ದವರ ಮೇಲೆ ಟಿಪ್ಪರ್ ಹರಿದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಮತ್ತು ಪುರುಷ ಕೆಳಗೆ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಜಿಗಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *