Breaking News

ಮಂಗಳೂರಿನಲ್ಲಿ ಮತ್ತೆ ರಕ್ತಪಾತ; ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣದಿಂದ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಹೇಮಂತ್ ಎಂಬ ವಿದ್ಯಾರ್ಥಿ ಅಪ್ರಾಪ್ತ ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ ಮಾಡಿದ್ದು, ಗಲಾಟೆ ತಪ್ಪಿಸಲು ಮುಂದಾದ ಮತ್ತೊಬ್ಬ ವಿದ್ಯಾರ್ಥಿಗೂ ಗಾಯವಾಗಿದೆ. ಓರ್ವನಿಗೆ ಬೆನ್ನು ಮತ್ತು ಮತ್ತೊಬ್ಬನಿಗೆ ತೊಡೆ ಭಾಗದಲ್ಲಿ ಗಾಯವಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ವಿಟ್ಲ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸ್ಥಳಕ್ಕೆ ಬಂಟ್ವಾಳ ಡಿವೈಎಸ್​​ಪಿ ಭೇಟಿ ನೀಡಿದ್ದಾರೆ. ಹೇಮಂತ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸ್ಥಳದಲ್ಲಿ ಕೂಡಲೇ ಜನರ ಕಾನೂನು ಉಲ್ಲಂಘನೆ ತಪ್ಪಿಸಲು ಪೊಲೀಸರು ಕಡು ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *