Breaking News

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಅಪರಾಧಿಗೆ ಶಿಕ್ಷೆ ಪ್ರಕಟ

ಬೆಳಗಾವಿ: ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದ್ದ ಮಾರುತಿ ನಗರದ ನಿವಾಸಿ ಗಜಾನನ ಅಣ್ಣಪ್ಪ ಪಾಟೀಲ( 35) ಅಪರಾಧಿಗೆ 7 ವರ್ಷ ಕಾರಾಗೃಹ ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ. ಅಪರಾಧಿಯನ್ನು ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಅಪಹರಣ ಮಾಡಲು ಯತ್ನಿಸಿ, ಲೈಂಗಿಕ ದೌರ್ಜನ್ಯ ವೆಸಗಿದರ ಕುರಿತು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ೨೦೨೩ರಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ತನಿಖಾಧಿಕಾರಿ ಸಂತೋಷ ದಳವಾಯಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ವಿಶೇಷ ಶೀಘ್ರಗತಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪಿಸಿದ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ.ರೂ ಪರಿಹಾರ ಧನ ನೀಡುವಂತೆ ಸೂಚಿಸಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *