Breaking News

ಹೊಸಪೇಟೆ: ಪಿಡಬ್ಲ್ಯುಡಿ ಕಚೇರಿ ಮೇಲೆ ಲೋಕಾ ದಾಳಿ – ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಲಂಚಬಾಕರು.!

ಕಾಮಗಾರಿ ಬಿಲ್ ಮಂಜೂರಿಗಾಗಿ ₹1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆ ಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಮತ್ತು ಅಕೌಂಟೆಂಟ್ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಈ ಟ್ರ್ಯಾಪ್ ನಡೆದಿದೆ. ಹೂವಿನ ಹಡಗಲಿಯ ಮಹೇಶ್ ಹಲಗೇರಿ ಎಂಬ ಗುತ್ತಿಗೆದಾರರು ಪಿಡಬ್ಲ್ಯುಡಿ ಟೆಂಡರ್ ಪಡೆದು ಕೆಲಸ ಮುಗಿಸಿದ್ದರು. ಆದರೆ ಬಿಲ್ ಬಿಡುಗಡೆಗೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ₹1 ಲಕ್ಷ ಲಂಚ ಕೇಳಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸತ್ತ ಮಹೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಸಚಿನ್ ಎಸ್. ಛಲವಾದಿ ಅವರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಲಂಚದ ಹಣ ಸ್ವೀಕರಿಸುತ್ತಿದ್ದಾಗ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *