Breaking News

ಟಿಪ್ಪರ್ ನಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದ ಪ್ರಭಾರ ಮುಖ್ಯ ಶಿಕ್ಷಕ ಸಸ್ಪೆಂಡ್

ದಕ್ಷಿಣ ಕನ್ನಡ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಸರ್ಕಾರಿ ಸಾರಿಗೆ ಬಸ್ಸುಗಳಲ್ಲೇ ಕರೆದೊಯ್ಯಬೇಕು ಎಂಬುದು ನಿಯಮ. ಈ ನಿಯಮವನ್ನೇ ಮೀರಿದಂತ ಶಾಲೆಯೊಂದು, ಟಿಪ್ಪರ್ ನಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಳೆಂಜ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಟಿಪ್ಪರ್ ಮೂಲಕ ಪ್ರವಾಸಕ್ಕೆ ಕರೆದೊಯ್ದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ವೀಡಿಯೋ, ಪೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡ ಆಗಿದ್ದವು. ಈ ಹಿನ್ನಲೆಯಲ್ಲಿ ಬಳೆಂಜ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಿರಣ್ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಶಶಿಧರ್ ಆದೇಶ ಮಾಡಿದ್ದಾರೆ. ಆ ಮೂಲಕ ಟಿಪ್ಪರ್ ನಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕನಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *