Breaking News

ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಕ್ಯಾಂಟರ್, ಬೈಕ್, ಕಾರಿನ ನಡುವೆ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು !

ಹೊಸಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಸರಣಿ ಅಪಘಾತವಾಗಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *