ಶಿವಮೊಗ್ಗ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಬಗ್ಗೆ ತೀರ್ಥಹಳ್ಳಿ ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ. ಹೊಸನಗರದ ಮಳಲಿ ಗ್ರಾಮದ ನಿವಾಸಿ ರಾಜೇಶ್ ಹಿರೇಮನೆ ಬಂಧಿತ ಆರೋಪಿ. ಬುಧವಾರ ಮಧ್ಯಾಹ್ನ ಬಂಧನಕ್ಕೆ ಒಳಗಾಗಿದ್ದ ಅವರಿಗೆ ಗುರುವಾರ ಜಾಮೀನು ದೊರೆತಿದೆ. ರಾಹುಲ್ ಗಾಂಧಿ ಅವರ ಮುಖದ ಅರ್ಧ ಭಾಗ ಮತ್ತು ಪಾಕಿಸ್ತಾನ ಸೇನಾಧಿಕಾರಿಯ ಮುಖದ ಅರ್ಧ ಭಾಗವಿರುವ ಫೋಟೋ ಎಡಿಟ್ ಮಾಡಿ ಸೇರಿಸಿ ಒಂದು ಅಜೆಂಡಾ ಎಂಬ ಟ್ಯಾಗ್ ಲೈನ್ ನಡಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಈ ಬಗ್ಗೆ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆಎಂಎಫ್‌ಸಿ ಕೋರ್ಟ್ ನ್ಯಾಯಾಧೀಶರು ಆರೋಪಿ ಬಂಧಿಸಲು ಆದೇಶಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

