Breaking News

ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ; ಬೆಚ್ಚಿಬಿದ್ದ ಶಿವಮೊಗ್ಗ

ಶಿವಮೊಗ್ಗ : ಜಿಲ್ಲೆಯ ಗಾಜನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ವ್ಯಕ್ತಿಯೊಬ್ಬನನ್ನು ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತನನ್ನು ಶಿವಮೊಗ್ಗ ನಗರದ ಹೊಸಮನೆ ಬಡಾವಣೆ 6ನೇ ತಿರುವಿನ ನಿವಾಸಿ ಶ್ರೀನಿವಾಸ್ (36) ಎಂದು ಗುರುತಿಸಲಾಗಿದೆ.ಶ್ರೀನಿವಾಸ್ ಗಾರೆ ಕೆಲಸ ಮಾಡುತ್ತಿದ್ದನು. ಗಾಜನೂರಿನಲ್ಲೂ ಗಾರೆ ಕೆಲಸಕ್ಕೆ ತೆರಳಿದ್ದ ಆತ ಕಳೆದ ಮೂರು ದಿನಗಳಿಂದ ಅಲ್ಲಿಯೇ ವಾಸವಾಗಿದ್ದನು. ನಿನ್ನೆ ರಾತ್ರಿ ಗಾಜನೂರು ಗ್ರಾಮದ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಪಕ್ಕದಲ್ಲಿ ಆತ ಇನ್ನೋರ್ವ ವ್ಯಕ್ತಿಯ ಜೊತೆ ಮದ್ಯಪಾನ ಮಾಡುತ್ತ ಕುಳಿತಿದ್ದುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕೊಲೆಯ ಕಾರಣ ಸ್ಪಷ್ಟವಿಲ್ಲ ಯಾವ ಕಾರಣಕ್ಕೆ ಈ ಹತ್ಯೆ ನಡೆದಿದೆ ಹಾಗೂ ಕೊಲೆ ಮಾಡಿದವರು ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *