Breaking News

ಅಪಘಾತ ಕೇಸ್ – ನಡುರಸ್ತೆಯಲ್ಲಿ ಸರ್ಕಾರಿ ಬಸ್ ಸೀಜ್.!

ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಚಿಕ್ಕಮಗಳೂರು ಡಿಪೋಗೆ ಸೇರಿದ ಎರಡು ಸರ್ಕಾರಿ ಬಸ್‌ಗಳನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸೀಜ್‌ ಮಾಡಲಾಗಿದೆ. ಅಪಘಾತ ಪ್ರಕರಣಕ್ಕೆ ಸಂಬಂಧಿಸಿದ ಬಸ್‌ಗಳನ್ನು ಚನ್ನರಾಯಪಟ್ಟಣ ಕೋರ್ಟ್ ಆವರಣಕ್ಕೆ ಕರೆದೊಯ್ಯುವಂತೆ ವಕೀಲರು ಸೂಚನೆ ನೀಡಿದ್ದಾರೆ. ಈ ವೇಳೆ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ನಡುರಸ್ತೆಯಲ್ಲೇ ಇಳಿಸಲಾಯಿತು. ಇದರಿಂದ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಆಕ್ರೋಶ ಹೊರಹಾಕಿದರು. ಯಾವುದೇ ಮುನ್ಸೂಚನೆ ಇಲ್ಲದೆ ಬಸ್‌ಗಳನ್ನು ಸೀಜ್‌ ಮಾಡಿದ ಕಾರಣ ಪ್ರಯಾಣಿಕರಿಗೆ ತೀವ್ರ ತೊಂದರೆಯಾಯಿತು ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು, ಕೆಲಕಾಲ ಸಂಚಾರ ಗೊಂದಲವೂ ಉಂಟಾಯಿತು. ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು. ಪರಿಹಾರದ ಹಣವನ್ನು ಕ್ಲೈಮ್ ಮಾಡದೇ ಇರುವುದರಿಂದ ಕೋರ್ಟ್ ನೀಡಿದ ಆದೇಶದ ಮೇರೆಗೆ ವಕೀಲರ ತಂಡ ಈ ಕ್ರಮ ಕೈಗೊಂಡಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *