Breaking News

ಶವ ಪ್ಯಾಕ್‌ ಮಾಡಿ ಕೊಡಲು ಹುಬ್ಬಳ್ಳಿ ಕಿಮ್ಸ್‌ನಲ್ಲಿ ಲಂಚ ಕೊಡಬೇಕಂತೆ!

ಹುಬ್ಬಳ್ಳಿ: ಕೆಎಂಸಿ-ಆರ್‌ಐ ಆಸ್ಪತ್ರೆಯಲ್ಲಿ ಮಹಿಳೆಯ ಶವ ಪ್ಯಾಕ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬುಧವಾರ ನಡೆದಿದ್ದು, ಕುಟುಂಬದವರ ಆಕ್ರೋಶಕ್ಕೆ ಕಾರಣವಾಯಿತು. ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಗದ್ದೆಮ್ಮಾ (52) ಅವರು ಜ.31ರಂದು ಕೆಎಂಸಿ-ಆರ್‌ಐ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಬುಧವಾರ ಮೃತಪಟ್ಟಿದ್ದರು. ‘ಹಣ ನೀಡಿದರಷ್ಟೇ ಮೃತದೇಹ ಪ್ಯಾಕ್ ಮಾಡುವುದಾಗಿ ಶವಾಗಾರದ ಸಿಬ್ಬಂದಿ ಪಟ್ಟು ಹಿಡಿದಿದ್ದು, ಫೋನ್‌ ಪೇ ಮೂಲಕ ಹಣ ಪಾವತಿಸಿಕೊಂಡಿದ್ದಾರೆ’ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ಸಿಬ್ಬಂದಿ ಹಣ ಕೇಳಿರುವ ಆರೋಪ ಕೇಳಿ ಬಂದಿದೆ. ವೈದ್ಯಕೀಯ ಅಧೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಿದ್ದು, ವರದಿಯಾಧರಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಕೆಎಂಸಿ-ಆರ್‌ಐ ಆಸ್ಪತ್ರೆಯ ನಿರ್ದೇಶಕ ಡಾ. ಈಶ್ವರ ಹೊಸಮನಿ ಹೇಳಿದರು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *