Breaking News

ಕಲಬುರ್ಗಿಯಲ್ಲಿ ಭೀಕರ ಮರ್ಡರ್ : ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!

ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಸಂಜೆ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಗಾಜಿಪುರ ಬಡಾವಣೆಯ ನಿವಾಸಿ ಶರಣಬಸಪ್ಪ ಗೌಳಿ (35) ಎಂದು ಗುರುತಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಶರಣು ಗೌಳಿ ಅವರು ಶುಕ್ರವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಸೂಪರ್ ಮಾರ್ಕೆಟ್‌ನ ನರ್ತಕಿ ಬಾರ್ ಪಾರ್ಕಿಂಗ್ ಪ್ರದೇಶದಲ್ಲಿ ನಿಂತಿದ್ದಾಗ, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್‌.ಡಿ., ಎಸಿಪಿ ಶಿವನಗೌಡ ಪಾಟೀಲ ಹಾಗೂ ಬ್ರಹ್ಮಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *