Breaking News

ದಿಲ್ಲಿ ಕೆಂಪುಕೋಟೆ ದಾಳಿಯಲ್ಲಿ ಜೈಶ್‌ ಕೈವಾಡ: ವಿಶ್ವಸಂಸ್ಥೆ ಭದ್ರತಾ ಸಮಿತಿ ತಂಡ

ವಿಶ್ವಸಂಸ್ಥೆ: ಕಳೆದ ನವೆಂಬರ್‌ನಲ್ಲಿ ದೆಹಲಿಯ ಕೆಂಪುಕೋಟೆ ಬಳಿ ನಡೆದ ಉಗ್ರ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಕೈವಾಡವಿದೆ ಎಂದು ವಿಶ್ವಸಂಸ್ಥೆ ಭದ್ರತಾ ಸಮಿತಿಯ ನಿರ್ಬಂಧಗಳ ಮೇಲ್ವಿಚಾರಣಾ ತಂಡ ತಿಳಿಸಿದೆ. ಜೈಶ್-ಎ-ಮೊಹಮ್ಮದ್ ಸಂಘಟನೆಯು ಇತ್ತೀಚೆಗಿನ ಸರಣಿ ದಾಳಿಗಳ ಹೊಣೆಯನ್ನು ಹೊತ್ತುಕೊಂಡಿದ್ದು, ಅದರಲ್ಲಿ 2025ರ ನ.9ರಂದು ನವದೆಹಲಿಯ ಕೆಂಪು ಕೋಟೆಯ ಬಳಿ ನಡೆದ ದಾಳಿಯೂ ಸೇರಿರುವ ಸಾಧ್ಯತೆಯಿದೆ ಎಂದು ಸದಸ್ಯ ರಾಷ್ಟ್ರವೊಂದು ತಿಳಿಸಿದೆ. ಐಎಸ್‌ಐಎಲ್ ಮತ್ತು ಅಲ್-ಖೈದಾಗೆ ಸಂಬಂಧಿಸಿದ ಭದ್ರತಾ ಮಂಡಳಿಯ ನಿರ್ಬಂಧಗಳ ಸಮಿತಿಗೆ ಸಲ್ಲಿಸಿದ ವಿಶ್ಲೇಷಣಾತ್ಮಕ ಬೆಂಬಲ ಮತ್ತು ನಿರ್ಬಂಧಗಳ ಮೇಲ್ವಿಚಾರಣಾ ತಂಡದ 37ನೇ ವರದಿ ಈ ವಿಚಾರವನ್ನು ತಿಳಿಸಿದೆ. ಇದಕ್ಕೂ ಮುನ್ನ ಅಕ್ಟೋಬರ್‌ 8ರಂದು ಜೈಶ್‌ ನಾಯಕ ಮೊಹಮ್ಮದ್‌ ಮಸೂದ್‌ ಅಜರ್‌ ಅಲ್ವಿ, ಉಗ್ರ ಕೃತ್ಯಗಳಿಗೆ ನೆರವು ನೀಡುವ ಗುರಿಯೊಂದಿಗೆ ಜಮಾತ್‌ ಉಲ್‌-ಮುಮಿನತ್‌ ಎಂಬ ಮಹಿಳಾ ವಿಭಾಗವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದ ಎಂದೂ ವರದಿ ಹೇಳಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *