Breaking News

ಬೆಳ್ತಂಗಡಿಯಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ

ಮಂಗಳೂರು: ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ. ಅಗ್ನಿ ಅವಘಡದಿಂದಾಗಿ ಕೆ ಎ ಎಫ್ ಕ್ರಿಯೇಟಿವ್ ಶಾಪ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಘಟನಾಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *