Breaking News

ಶ್ರೀಶೈಲಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಕರ್ನಾಟಕ ಮೂಲದ ಮೂವರು ದುರ್ಮರಣ

ಕರ್ನೂಲ್: ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶ್ರೀಶೈಲಕ್ಕೆ ತೆರಳುತ್ತಿದ್ದ ಮೂವರು ಭಕ್ತರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನಾಗರ್ ಕರ್ನೂಲು ಜಿಲ್ಲೆಯಲ್ಲಿ ಸಂಭವಿಸಿದೆ. ಇಲ್ಲಿನ ಉರ್ಕೊಂಡ ಮಂಡಲ್ ಪ್ರದೇಶದ ತಿಮ್ಮಣ್ಣಪಲ್ಲಿ ಬಳಿ ವ್ಯಾನ್ ಪಲ್ಟಿಯಾಗಿ ಬಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮೃತರು ಕರ್ನಾಟಕ ಮೂಲದವರಾಗಿದ್ದು, ಕರ್ನಾಟಕದಿಂದ ಶ್ರೀಶೈಲಕ್ಕೆ ವ್ಯಾನ್ ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಮೂವರು ಸಾವನ್ನಪ್ಪಿದ್ದು, ವ್ಯಾನ್ ನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕದಿಂದ ಶ್ರೀಶೈಲಕ್ಕೆ ತೆರಳುತ್ತಿದ್ದಾಗ ವ್ಯಾನ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *