Breaking News

ಸಿಎಂ ಹೆಸರಲ್ಲಿ ನಕಲಿ ವರ್ಗಾವಣೆ ಟಿಪ್ಪಣಿ: ಎಫ್‌ಐಆರ್ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಲ್ಲಿ ನಕಲಿ ವರ್ಗಾವಣೆ ಟಿಪ್ಪಣಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆ ಪೊಲೀಸರು ದಾಖಲಿಸಿದ್ದಾರೆ. ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿ(ಆಡಳಿತ) ಅವರ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯ್ದೆಯ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಧಿಕೃತ ಸಂಖ್ಯೆ ದಿನಾಂಕವಿಲ್ಲದ ವರ್ಗಾವಣೆಯ ಟಿಪ್ಪಣಿ ಸೃಷ್ಟಿಸಿ ಹರಿಬಿಡಲಾಗಿದೆ. ಮುಖ್ಯಮಂತ್ರಿ ಸಚಿವಾಲಯದ ಇ- ತಂತ್ರಾಂಶದಲ್ಲಿ ಅದು ನೋಂದಣಿಯಾಗಿಲ್ಲ. ಟಿಪ್ಪಣಿಯನ್ನು ಯಾವುದೇ ಇಲಾಖೆಗೆ ರವಾನೆ ಮಾಡಿಲ್ಲ. ಇದರ ಆಧಾರದಲ್ಲಿ ಯಾವುದೇ ವರ್ಗಾವಣೆ, ನಿಯೋಜನೆ ಆದೇಶ ಸಹ ಹೊರಡಿಸಿಲ್ಲ. ಹೀಗಿದ್ದರೂ ಮುಖ್ಯಮಂತ್ರಿಗಳು ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೃತ್ಯವೆಸಗಲಾಗಿದೆ ಎಂದು ದೂರು ನೀಡಲಾಗಿದೆ. ಮಂಡ್ಯ ಜಿಲ್ಲೆ ಆರೋಗ್ಯ ಇಲಾಖೆ ಅಧಿಕಾರಿ ಡಾ.ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನುವ ರೀತಿ ಟಿಪ್ಪಣಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿ ಬಿಡಲಾಗಿತ್ತು. ಈ ಬಗ್ಗೆ ಬಿಜೆಪಿ ನಾಯಕರು ಟೀಕಿಸಿದ್ದರು. ಇಂತಹ ಅಪಪ್ರಚಾರ ಸಹಿಸುವುದಿಲ್ಲ, ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮೊದಲು ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸುವಂತೆ ಸಿದ್ದರಾಮಯ್ಯ ತಿಳಿಸಿದ್ದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *