Breaking News

ಕಾರಿನ ಮೇಲೆ ಮಗುಚಿ ಬಿದ್ದ ಲಾರಿ: ಟೆಕ್ಕಿ ದುರ್ಮರಣ

ಚಿತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಟೆಕ್ಕಿಯೋರ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾರಿನ ಮೇಲೆ ಲಾರಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಟೆಕ್ಕಿ ಸಾವನ್ನಪ್ಪಿದ್ದಾರೆ. ಚಿತ್ತೂರು-ಬೆಂಗಳೂರು ಹೈವೇಯಲ್ಲಿ ಈ ಘಟನೆ ನಡೆದಿದೆ. ಗುಡಿಪಾಲ ಮಂಡಲದ ರಾಮಪುರಂ ಗ್ರಾಮದ ನಿವಾಸಿ ಡಿ ಅನುದೀಪಕ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *