Breaking News

ಹುಬ್ಬಳ್ಳಿ: ಪೊಲೀಸ್ ಕಸ್ಟಡಿಯಿಂದ ಕೊಲೆ ಆರೋಪಿ ಪರಾರಿ.. ಪೊಲೀಸರ ಭದ್ರತಾ ವೈಫಲ್ಯವೇ…?

ಹುಬ್ಬಳ್ಳಿ: ನಗರದ ಬೆಂಡಿಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ವಿಚಾರಣೆಗೆಂದು ಠಾಣೆಗೆ ಕರೆ ತಂದಿದ್ದಾಗ ಪರಾರಿಯಾಗಿದ್ದಾನೆ. ನಗರದ ಮಂಟೂರ ರಸ್ತೆಯಲ್ಲಿ 2025ರ ನ.13ರಂದು ಮಲ್ಲಿಕ್‌ ಎಂಬಾತನ ಮೇಲೆ 8-10 ಜನರ ಗುಂಪು ಹಲ್ಲೆ ಮಾಡಿ ಕೊಲೆ ಮಾಡಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರಜ್ವಲ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು. ನಗರದ ಉಪ ಕಾರಾಗೃಹದಲ್ಲಿದ್ದ ಈತ ಜೈಲು ಸಿಬಂದಿಯೊಂದಿಗೆ ಕಿರಿಕ್‌ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ

ವಿಜಯಪುರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮತ್ತೂಂದು ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಆತನನ್ನು ಬೆಂಡಿಗೇರಿ ಪೊಲೀಸರು ಫೆ.10ರಂದು ಠಾಣೆಗೆ ಕರೆತಂದಿದ್ದರು. ಆಗ ಪೊಲೀಸರ ಕಣ್ಣುತಪ್ಪಿಸಿ ಪರಾರಿಯಾಗಿದ್ದಾನೆ. ಈ ಘಟನೆಗೆ ಸಂಬಂಧಿಸಿ ಹು-ಧಾ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರಜ್ವಲ್‌ನನ್ನು ವಿಚಾರಣೆಗೆಂದು ಠಾಣೆಗೆ ಕರೆತಂದಿದ್ದಾಗ ಸಿಬಂದಿ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ. ಆದಷ್ಟು ಬೇಗ ಆತನನ್ನು ವಶಕ್ಕೆ ಪಡೆಯುತ್ತೇವೆ. ಸಿಬಂದಿ ನಿರ್ಲಕ್ಷÂದಿಂದ ಈ ಘಟನೆ ನಡೆದಿದೆ. ಈ ಬಗ್ಗೆ ಠಾಣೆಯ ಇನ್‌ಸ್ಪೆಕ್ಟರರಿಂದ ವರದಿ ಕೇಳಿದ್ದೇನೆ. ಅವರು ಇಬ್ಬರ ಮೇಲೆ ವರದಿ ನೀಡಿದ್ದಾರೆ. ಅದನ್ನಾಧರಿಸಿ ಕರ್ತವ್ಯ ಲೋಪ ಎಸಗಿದ ಸಿಬಂದಿ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *