Breaking News

ಕೋಳಿ ಅಂಕಕ್ಕೆ ದಾಳಿ, ಇಬ್ಬರ ವಿರುದ್ಧ ಪ್ರಕರಣ ದಾಖಲು

ಕಡಬ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಗಾಣದ ಕೊಟ್ಯ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕ್ಕೆ ದಾಳಿ ನಡೆಸಿರುವ ಕಡಬ ಪೋಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಣದಕೊಟ್ಯದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದಾಗ ಅಲ್ಲಿ ಕೆಲವು ವ್ಯಕ್ತಿಗಳು ಕೋಳಿಗಳ ಕಾಲಿಗೆ ಬಾಳು ಕಟ್ಟಿ, ಹಣವನ್ನು ಪಣಕ್ಕಿಟ್ಟು ಜೂಜಾಟ ನಡೆಸುತ್ತಿರುವುದು ಪತ್ತೆಯಾಗಿತ್ತು. ಪೋಲೀಸರನ್ನು ಕಂಡು ಕೋಳಿ ಅಂಕದಲ್ಲಿ ನಿರತರಾಗಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ. ಈ ಸಂಬಂಧ ಬಂಟ್ರ ಗ್ರಾಮದ ಉಮೇಶಗೌಡ, ಐತ್ತೂರು ಗ್ರಾಮದ ವಿನಯ ಸಿ. ಹಾಗೂ ಇತರರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *