Breaking News

ರಾಜ್ಯದಲ್ಲಿ ಮಹಾಶಿವರಾತ್ರಿಯಂದೇ ಘೋರ ದುರಂತ : `KSRTC’ ಬಸ್ ಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು !

ಬೆಂಗಳೂರು: ರಾಜ್ಯದಲ್ಲಿ ಮಹಾಶಿವರಾತ್ರಿಯಂದೇ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ ಆರ್ ಟಿಸಿ ಬಸ್ ಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ನೆಲಮಂಗಲದ ಜಿಂದಾಲ್ ಸಮೀಪ ಕೆಎಸ್ ಆರ್ ಟಿಸಿ ಬಸ್ ಗೆ ಕಾರು ಡಿಕ್ಕಿಯಾಗಿ ಇಂಡಿಕಾ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಎಂದು ಗುರುತಿಸಲಾಗಿದೆ. ತುಮಕೂರು ಕಡೆಯಿಂದ ಕಾರಿನಲ್ಲಿ ಐವರು ಬರುತ್ತಿದ್ದರು. ನಿಯಂತ್ರಣ ತಪ್ಪಿದ ಕಾರು ಡಿವೈಡರ್ ನಿಂದ ಜಂಪ್ ಮಾಡಿ ಎದುರಿಗೆ ಕೆಎಸ್ ಆರ್ ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹಗಳನ್ನು ರವಾನೆ ಮಾಡಲಾಗಿದೆ. ಹರ್ಷಿತ್ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿ ಎನ್ನಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *