ಬೆಂಗಳೂರು: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕರು ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್ ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಾಂತರ ಕೆಲಸ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿತ್ತು ಎನ್ನಲಾಗಿದ್ದು, ಇಂದು ಕಾರ್ಮಿಕರು ರಾಸಾಯನಿಕ ಟ್ಯಾಂಕ್ ತೆರವು ಮಾಡುತ್ತಿದ್ದ ವೇಳೆ ಅವಘಡ ನಡೆದಿದೆ. ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ, ಇದೇ ಕಾರ್ಖಾನೆಯಲ್ಲಿ 4 ವರ್ಷಗಳ ಹಿಂದೆಯೂ ಅವಘಡ ನಡೆದಿತ್ತು. ರಾಸಾಯನಿಕ ಸೋರಿಕೆಯಾಗಿ ನೂರಾರು ಎಕರೆ ಬೆಳೆ ಹಾನಿಯ ಜೊತೆಗೆ ಎರಡು ನಾಯಿಗಳು ಮೃತಪಟ್ಟಿದ್ದವು. ಬಳಿಕ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಆ ವೇಳೆ ಹಾನಿಯಾದ ಬೆಳೆಗೆ ಮಂಡ್ಯ ಜಿಲ್ಲಾಡಳಿತ ಪರಿಹಾರ ಕೊಡಿಸಿದ್ದು, ಹೀಗಾಗಿ ಕಾರ್ಖಾನೆಯನ್ನ ಸದ್ಯ ಬೇರೆಡೆ ಸ್ಥಳಾಂತರ ಮಾಡಿಸಲಾಗುತ್ತಿತ್ತು. ಆದರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೆ ಇದ್ದಿದ್ದರಿಂದ ಮತ್ತೆ ದುರಂತ ನಡೆದಿದೆ. ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

