ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ ಸಂಭವಿಸಿದೆ. ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೇ ಛಿದ್ರವಾಗಿರುವ ಘಟನೆ ಬೆಂಗಳುರುನ ಯಲಹಂಕದಲ್ಲಿ ನಡೆದಿದೆ.ಯಲಹಂಕದ ಚೌಡೇಶ್ವರಿ ಲೇಔಟ್ ಮನೆಯೊಂದರಲ್ಲಿ ಈ ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು ಛಿದ್ರ ಛಿದ್ರಗೊಂಡಿವೆ. ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿ ರಾಜು ಹಾಗೂ ಕೃಷ್ಣಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

