ಟ್ರ್ಯಾಕ್ಟರ್ ಹಿಂಬದಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ಬೇಗೂರು ಬೈಪಾಸ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಮಾಗಡಿ ತಾಲೂಕಿನ ಚಿಕ್ಕ ಕಲ್ಯಾ ಗ್ರಾಮದ ನಿವಾಸಿ ಕೆಂಪೇಗೌಡ (23) ಎಂದು ಗುರುತಿಸಲಾಗಿದೆ. ಮೃತ ಕೆಂಪೇಗೌಡ ಅವರು ತಮ್ಮ ಗ್ರಾಮದಿಂದ ಟ್ರ್ಯಾಕ್ಟರ್‌ನಲ್ಲಿ ಎಂ-ಸ್ಯಾಂಡ್ ತುಂಬಿಸಿಕೊಳ್ಳಲು ಕುಣಿಗಲ್ ತಾಲೂಕಿನ ತರಿಕೆರೆ ಗ್ರಾಮದತ್ತ ತೆರಳುತ್ತಿದ್ದ ವೇಳೆ ಬೆಂಗಳೂರಿನಿಂದ ಉಡುಪಿ ಕಡೆಗೆ ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ನ ಹಿಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ತೀವ್ರ ಸ್ವರೂಪದ ಗಾಯಗೊಂಡ ಕೆಂಪೇಗೌಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

