Breaking News

ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಬೆಳಗ್ಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ನ್ಯಾಯಾಲಯ ಸಂಕೀರ್ಣವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಯಿತು. ಇಂದು (ಸೋಮವಾರ) ಬೆಳಗ್ಗೆ 8:30ಕ್ಕೆ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಗೊತ್ತಾಗಿದೆ. ತಕ್ಷಣ ಶ್ವಾನ ದಳ, ಬಾಂಬ್ ನಿಷ್ಕೃಯ ದಳ ನ್ಯಾಯಾಲಯಕ್ಕೆ ಆಗಮಿಸಿ ಇಡೀ ನ್ಯಾಯಾಲಯ ಸಂಕೀರ್ಣವನ್ನು ತಪಾಸಣೆ ನಡೆಸಿತು. ಆದರೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಬಾಂಬ್ ಬೆದರಿಕೆ ಇ-ಮೇಲ್ ಮೂಲವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯ ಸೇರಿದಂತೆ ನಗರದ ಪ್ರಮುಖ ಸ್ಥಳಗಳು, ಕಟ್ಟಡಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *